ನವೆದೆಹಲಿ,ಏಪ್ರಿಲ್,3,2025 (www.justkannada.in): ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು ಈ ಮಸೂದೆಗೆ ಕಾಂಗ್ರೆಸ್ ನಾಯಕರ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ರಾಹುಲ್ ಗಾಂಧಿ, ವಕ್ಫ್ ಬಿಲ್ ನಲ್ಲಿ ಮುಸ್ಲೀಮರ ಕಡೆಗಣನೆ ಮಾಡಲಾಗಿದೆ. ಮುಸ್ಲೀಮರ ಆಸ್ತಿ ಹಕ್ಕು ಕಸಿದುಕೊಂಡಿದ್ದಾರೆ. ಬಿಜೆಪಿಯು ಮುಸ್ಲೀಮರನ್ನ ಟಾರ್ಗೆಟ್ ಮಾಡುತ್ತಿದೆ. ವಕ್ಫ್ ತಿದ್ದುಪಡಿ ಮಸೂದೆಗೆ ನಮ್ಮ ವಿರೋಧ ಇದೆ ಎಂದಿದ್ದಾರೆ.
ಲೋಕಸಭೆಯಲ್ಲಿ ಚರ್ಚೆ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿವೆ.
Key words: Waqf Amendment Bill, BJP, target, Muslims, Rahul Gandhi