ನವದೆಹಲಿ, ಮೇ 08, 2019 (www.justkannada.in): ರಫೇಲ್ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪಿಗೆ ‘ಚೌಕೀದಾರ್ ಚೋರ್ ಹೈ’ ಘೋಷಣೆಯೊಂದಿಗೆ ಸಂಬಂಧ ಕಲ್ಪಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಈ ಹಿಂದೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅಫಿಡವಿಟ್ ಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಬೇಷರತ್ ಕ್ಷಮೆ ಯಾಚಿಸಿದ್ದಾರೆ.
‘ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂ ಕೋರ್ಟ್ ಹೇಳಿದೆ’ ಎಂಬ ತನ್ನ ಹೇಳಿಕೆ ಉದ್ದೇಶ ಪೂರ್ವಕವಲ್ಲದ ಹೇಳಿಕೆಯಾಗಿದೆ. ಈ ಕಾರಣದಿಂದಾಗಿ ತಾನು ನ್ಯಾಯಾಲಯದ ಬೇಷರತ್ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಮೂರು ಪುಟಗಳ ಕ್ಷಮೆಯಾಚನಾ ಪತ್ರದಲ್ಲಿ ಹೇಳಿದ್ದಾರೆ.