ನಾಳೆ ಬೆಂಗಳೂರು ಕೋರ್ಟ್ ಗೆ ರಾಹುಲ್ ಗಾಂಧಿ ಖುದ್ದು ಹಾಜರು ಸಾಧ್ಯತೆ.

ಬೆಂಗಳೂರು,ಜೂನ್,6,2024 (www.justkannada.in):  ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಸುಳ್ಳು ಜಾಹೀರಾತು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗುವ ಸಾಧ್ಯತೆ ಇದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್, ಪೇ ಸಿಎಂ ಎಂಬ ಜಾಹೀರಾತು ನೀಡಿದ್ದರು.  ಈ  ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಮುಖಂಡ  ಎಸ್. ಕೇಶವ ಪ್ರಸಾದ್ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕೋರ್ಟ್‌ ಹಾಜರಾಗಿ ಬಳಿಕ ಜಾಮೀನು ಪಡೆದು ವಾಪಸ್ ಬಂದಿದ್ದರು.  ಇದೀಗ ರಾಹುಲ್‌ ಗಾಂಧಿ ಅವರು ನಾಳೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್‌ ಗೆ ಖುದ್ದು ಹಾಜರಾಗಲಿದ್ದಾರೆ ಎನ್ನಲಾಗಿದೆ.

Key words: Rahul Gandhi, Bengaluru, court, tomorrow