ಚಾಮರಾಜನಗರ,ಸೆಪ್ಟಂಬರ್,30,2022(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿದ್ದು, ಅದ್ದೂರಿ ಸ್ವಾಗತದ ಮೂಲಕ ಕರ್ನಾಟಕ ಕಾಂಗ್ರೆಸ್ ನಾಯಕರು ಪಾದಯಾತ್ರೆ ಬರಮಾಡಿಕೊಂಡರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಐಕ್ಯತಾ ಪಾದಯಾತ್ರೆ ಆಗಮಿಸಿತು. ಗುಂಡ್ಲುಪೇಟೆಯಲ್ಲಿ ಸಮಾವೇಶ, ವೇದಿಕೆ ಕಾರ್ಯಕ್ರಮದ ಬಳಿಕ ಮತ್ತೆ ಪಾದಯಾತ್ರೆ ಆರಂಭವಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸುಜೀವಾಲ ವೀರಪ್ಪ ಮೋಯಿ, ಡಿಕೆ ಶಿವಕುಮಾರ್, ಹರಿ ಪ್ರಸಾದ್ ಸೇರಿದಂತೆ ಹಲವು ನಾಯರು ಭಾಗಿಯಾಗಿದ್ದಾರೆ.
ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಡವರ ಬಗ್ಗೆ ಸಂಸತ್ತಿನಲ್ಲಿ ಮಾತಾನಾಡಲು ಮುಂದಾರೆ ಮೈಕ್ ಬಂದ್ ಮಾಡುತ್ತಾರೆ. ಮಾಧ್ಯಮವಗಳನ್ನೇ ನಿಯಂತ್ರಣ ಮಾಡಲು ಬಿಜೆಪಿ ಮುಂದಾಗಿದೆ. ಭಾರತದಲ್ಲಿ ಭ್ರಷ್ಟಾಚಾರ ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆಯಿಂದ ಹೊರಟ ಭಾರತ್ ಜೋಡೋ ಪಾದಯಾತ್ರೆಗೆ ಜನ ಸಾಗರವೇ ಹರಿದು ಬಂದಿದ್ದು, ನಿರೀಕ್ಷೆಗೂ ಮೀರಿ ಪಾದಯಾತ್ರೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿದ್ದಾರೆ.
Key words: Rahul Gandhi – Bharat Jodo Yatra – state-people