ಬೆಂಗಳೂರು,ಜೂನ್,7,2024 (www.justkannada.in): ಬಿಜೆಪಿ ವಿರುದ್ದ 40% ಕಮಿಷನ್ ಆರೋಪದ ಜಾಹೀರಾತು ಪ್ರಕರಣದಲ್ಲಿ ರಾಹುಲ್ ಗಾಂಧಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಸುಳ್ಳು ಕೇಸ್ ದಾಖಲಿಸಿದೆ.ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಪಾತ್ರವಿಲ್ಲ. ನಾನು ಸಿದ್ದರಾಮಯ್ಯ ಜಾಹೀರಾತು ನೀಡಿದ್ದವು. ಬಿಜೆಪಿ ವಿರುದ್ದ 40 ಪರ್ಸೆಂಟ್ ಕಮಿಷನ್ ಜಾಹೀರಾತು ನೀಡಿದ್ದವು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ತನಿಖೆ ಆಗುವವರೆಗೂ ರಾಜೀನಾಮೆ ಕೊಡಿ ಎಂದಿದ್ದವು. ಹೀಗಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
Key words: Rahul Gandhi , court, DK Shivakumar