ಹಾಸನ,ಜೂನ್,22,2022(www.justkannada.in): ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ ಇರುತ್ತವೆ. ಅರ್ಧ ಗಂಟೆಯಲ್ಲೇ ಎಲ್ಲಾ ವಿಚಾರಣೆ ಮಾಡಿ ಮುಗಿಸಬಹುದು” ಎಂದು ಅಭಿಪ್ರಾಯಪಟ್ಟರು.
ಸುಮ್ಮನೆ ರಾಹುಲ್ ಗಾಂಧಿ ಅವರಿಗೆ ಕಿರಿಕುಳ ನೀಡುವ ದುರುದ್ದೇಶದಿಂದ ಈ ರೀತಿ ವಿಚಾರಣೆ ಮಾಡುತ್ತಿದ್ದಾರೆ. ಸುಬ್ರಹ್ಮಣ್ಯಸ್ವಾಮಿ ದೂರು ನೀಡಿದರು ಎಂದು ತನಿಖೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸ್ವತಃ ಪ್ರಧಾನಿಗಳಿಗೆ ಪತ್ರ ಬರೆದು 40% ಕಮಿಷನ್ ಬಗ್ಗೆ ದೂರಿದ್ದರು. ಈ ಬಗ್ಗೆ ಯಾಕೆ ಇಲ್ಲಿಯವರೆಗೆ ತನಿಖೆ ನಡೆಸಲಿಲ್ಲ ಎಂದು ಅವರು ಪ್ರಶ್ನೆ ಮಾಡಿದರು.
ಕೇವಲ ರಾಜಕೀಯ ಕಾರಣಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಲಾಗುತ್ತಿದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
Key words: Rahul Gandhi –ED- Former CM-HD Kumaraswamy.
ENGLISH SUMMARY…
Rahul Gandhi harassed in name of ED questioning: Former CM HDK alleges
Hassan, June 22, 2022 (www.justkannada.in): Former Chief Minister H.D. Kumaraswamy today expressed his view that Congress leader Rahul Gandhi is being harassed in the name of questioning by the Enforcement Directorate.
Speaking to the media persons at Hassan today, the former CM said, “The ED officials are asking Rahul Gandhi to appear before them frequently in the name of collecting information. Do they require five days for that? They have all the documents. The entire inquiry can be concluded within half an hour,” he said.
“They are doing this just to harass Rahul Gandhi. They started the inquiry following a complaint by Subramanian Swami. In Karnataka, the Contractors’ Association President Kempanna himself had written a letter to Prime Minister Narendra Modi about 40% commission. But why didn’t they conduct an investigation in it,” he questioned.
“Anyone can understand that the ED questioning of Rahul Gandhi is a political revenge,” he replied to a question.
Keywords: Former CM H.D. Kumaraswamy/ ED questioning/ Rahul Gandhi/ harassment