ನವದೆಹಲಿ,ಜೂನ್,21,2022(www.justkannada.in): ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಮತ್ತು ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಇಂದು ಮುಂದುವರೆದಿದ್ದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಕಚೇರಿ ಬಳಿ ರಾಷ್ಟ್ರೀಯ ಕಾಂಗ್ರೆಸ್ ಯುವಘಟಕದ ಅಧ್ಯಕ್ಷ ಬಿವಿ ಶ್ರೀನಿವಾಸ್ ಸೇರಿಉ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೃಹತ್ ಪ್ರತಿಭಟನೆಗೆ ಮುಂದಾದರು. ಬ್ಯಾರಿಕೇಡ್ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ಧು ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನ ತಡೆಯಲು ಪೊಲೀಸರು ಹರಸಾಹಸ ಪಟ್ಟರು.
ಈ ನಡುವೆ ಧರಣಿನಿರತರಾಗಿದ್ಧ ಬಿವಿ ಶ್ರೀನಿವಾಸ್ ಸೇರಿ ಹಲವು ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದನ್ನ ವಿರೋಧಿಸಿ ಕಾಂಗ್ರೆಸ್ ಹೋರಾಟ ಮುಂದುವರೆದಿದ್ದು ನಾಳೆ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಎಲ್ಲಾ ಕಾಂಗ್ರೆಸ್ ಶಾಸಕರು ದೆಹಲಿಗೆ ಬರುವಂತೆ ಸೂಚನೆ ನೀಡಿದೆ.
Key words: Rahul Gandhi-ED- inquiry- protest-congress