ಬೆಂಗಳೂರು,ಜೂನ್,8,2024 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕೆಂಬುದು ನಮ್ಮೆಲ್ಲರ ಆಶಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು. ವಿಪಕ್ಷ ನಾಯಕನ ಆಯ್ಕೆ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿಯೂ ತೀರ್ಮಾನವಾಗಲಿದೆ ಎಂದರು.
ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆಯನ್ನು ಮಾಡಿ ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್ ನಲ್ಲಿ ಚರ್ಚಿಸಲು ಗಟ್ಟಿ ಧ್ವನಿಯಾಗಿ ರಾಹುಲ್ ಗಾಂಧಿ ನಿಲ್ಲಬೇಕು.ಹೀಗಾಗಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕೆಂಬುದು ನಮ್ಮೆಲ್ಲರ ಆಶಯ ಎಂದರು.
ಹಾಗೆಯೇ ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ತನಿಖೆ ವೇಳೆ ಅನೇಕ ವಿಚಾರಗಳು ಬೆಳಕಿಗೆ ಬರುತ್ತವೆ. ತನಿಖೆಯಲ್ಲಿ ಹಲವರ ಹೆಸರುಗಳು ಹೊರ ಬರುತ್ತವೆ. ಈ ಬಗ್ಗೆ ಎಸ್ ಐಟಿ ಅಧಿಕಾರಿಗಳೂ ತನಿಖೆ ನಡೆಸುತ್ತಾರೆ. ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಆದರೆ ಯಾರು ಏನೇ ಹೇಳಿದ್ರೂ ಅದನ್ನು ಪರಿಶೀಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
Key words: Rahul Gandhi, opposition leader, Minister, G. Parameshwar