ಬೆಂಗಳೂರು, ಜೂನ್ 06, 2021 (www.justkannada.in): ಭಾಷಾ ತಾರತಮ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಎಂದು ಸರ್ಕಾರಿ ಆಸ್ಪತ್ರೆಗಳು ತಮ್ಮ್ ನರ್ಸ್ ಗಳಿಗೆ ಸೂಚಿಸಿದ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿದ ಅವರು ಮಲಯಾಳಂ ಸಹ ಭಾರತೀಯ ಭಾಷೆ, ಭಾಷಾ ತಾರತಮ್ಯವನ್ನು ನಿಲ್ಲಿಸಿ ಎಂದಿದ್ದಾರೆ.
ಅಂದಹಾಗೆ ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನೆಲ್ಲಾ ಶುಶ್ರೂಷಾ ಸಿಬ್ಬಂದಿ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸುವಂತೆ ನಿರ್ದೇಶಿಸಿತ್ತು.