ಬೆಂಗಳೂರು,ಆಗಸ್ಟ್,26,2022(www.justkannada.in): ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದುಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದ ಹಲವೆಡೆ ಗಾಳಿ ಸಹಿತ ಮಳೆ ಪುನಾರಂಭವಾಗಿದ್ದು, ಬನಶಂಕರಿ, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್, ತ್ಯಾಗರಾಜನಗರ, ಬಸವನಗುಡಿ, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಮತ್ತು ಶಾಂತಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನು ಕರವಾಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಹವಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಿದ್ದು, ಕೆಲವೊಮ್ಮೆ ಅತಿಭಾರಿ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Key words: Rain – another- 5 days – state.