ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’

ಬೆಂಗಳೂರು,ಮಾರ್ಚ್,11,2025 (www.justkannada.in): ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.

ಹೌದು ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿದೆ. ನಗರದ ವಿವಿಧೆಡೆ  ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.

ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು  ಪರದಾಟ ನಡೆಸುತ್ತಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ ಎನ್ನಲಾಗಿದೆ.

Key words: ‘Rain, Bengaluru, summer, heat