ಬೆಂಗಳೂರು, ಅಕ್ಟೋಬರ್ 13,2023(www.justkannada.in): ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ , ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವ್ಯಾಟ್ ಗೆ ತಲುಪಿದೆ. ಹೀಗಾಗಿ ತೊಂದರೆಯಾಗಿದೆ. ಕಳೆದ ವರ್ಷ ಇದೇ ಅವಧಿಗೆ 9 ಸಾವಿರದಿಂದ 10 ಸಾವಿರ ಮೆ.ವ್ಯಾಟ್ ಇತ್ತು. ವಿದ್ಯುತ್ ಅನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ ಎಂದರು.
ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ.
ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ, ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
Key words: rain- electricity- demand -increased – CM Siddaramaiah