ಬೆಂಗಳೂರು, ಆಗಸ್ಟ್ 05, 2019 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ಮೂರ್ನಾಲ್ಕು ದಿನ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿಯಲಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಕಾವೇರಿ ಜಲಾನಯನ ಭಾಗದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.