ಬೆಂಗಳೂರು,ಮೇ,24,2022(www.justkannada.in): ಅಸಾನಿ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ಧ ಮಳೆರಾಯ ಮತ್ತೆ ಇಂದು ಅಬ್ಬರಿಸಲಿದ್ದಾನೆ ಎನ್ನಲಾಗಿದೆ.
ಹೌದು, ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ:, ರಾಜ್ಯದಲ್ಲಿ ಕರಾವಳಿ ಸೇರಿ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ,ಮಂಡ್ಯ, ಚಿಕ್ಕಮಗಳೂರು, ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ.
ಹಾಗೆಯೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಮುನ್ಸೂಚನೆ ಇದ್ದು ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತಿಚೇಗೆ ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಜನರು ತತ್ತರಿಸಿದ್ದರು. ಬೆಂಗಳೂರಿನಲ್ಲಿ ಮನೆಗಳಿಗೆ ಮನೆ ನೀರು ನುಗ್ಗಿ ಜನರು ತೊಂದರೆ ಅನುಭವಿಸಿದ್ದರು.
Key words: Rain -most – state –today