ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಮಳೆ- ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು,ಮೇ,14,2024 (www.justkannada.in): ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆರಾಯ ಅಬ್ಬರಿಸುತ್ತಿದ್ದು  ಇದೀಗ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಯಾದಗಿರಿ, ಹಾಸನ, ಮೈಸೂರು ಸೇರಿ ಹಲವು ಜಿಲ್ಲಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಕೂಡ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Rain, storm, next, state