ಮಂಗಳೂರು,ಸೆಪ್ಟಂಬರ್,14,2023(www.justkannada.in): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಇದೀಗ ಸೆಪ್ಟಂಬರ್ 20ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಲಾನ ಇಲಾಖೆ ತಿಳಿಸಿದೆ.
Key words: Rain- till -September 20 – Meteorological department