ಮಂಗಳೂರು,ಜೂನ್,29,2022(www.justkannada.in): ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡಿನ ಸಂಗತಿ. ಈ ಘಟನೆಯ ಹಿಂದೆ ವಿದೇಶಿ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಉದಯಪುರದಲ್ಲಿ ನಡೆದ ಘಟನೆ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಇದೊಂದು ವ್ಯವಸ್ಥಿತ ಸಂಚು. ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ನಡೆದಿದೆ. ಕಾಂಗ್ರೆಸ್ ಈಗ ಮೌನವಾಗಿರುವುದೇಕೆ..? ಎಂದು ಪ್ರಶ್ನಿಸಿದರು.
ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಆಗಬೇಕು, ಕೇಂದ್ರ ಸರ್ಕಾರ ಎಸ್ಐಎ ಕಳುಹಿಸಿದೆ. ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣ. ನಿರಂತರ ಗಲಭೆ ಸೃಷ್ಟಿಸಲು ಹತ್ಯೆ ಮಾಡಿ ಸಮಾಜ ಒಡೆಯಲಾಗುತ್ತಿದೆ. ಜಿಹಾದಿ ಹೆಸರಿನಲ್ಲಿ ಇದನ್ನ ಮಾಡಲಾಗುತ್ತಿದ್ದು, ವಿಶ್ವಾಸ ಕಡಿಮೆ ಮಾಡಲಾಗುತ್ತಿದೆ. ಜಿಹಾದಿ ಮಾನಸಿಕತೆ ಬೆಳೆಸಲು ಯತ್ನ ನಡೀತಾ ಇದೆ. ಕ್ರೂರಿಗಳಿಗೆ ಭಯ ಹುಟ್ಟಿಸಬೇಕು ಎಂದು ಕಟೀಲ್ ಹೇಳಿದರು.
Key words: rajastan-murder-case-incident-BJP- President -Nalin Kumar Katil.