ಬೆಂಗಳೂರು,ಫೆಬ್ರವರಿ,13,2025 (www.justkannada.in): ಮುಂದಿನ ತಿಂಗಳಿನಿಂದ ಐಪಿಎಲ್ ಜ್ವರ ಶುರುವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಟಿದಾರ್ ಆಯ್ಕೆಯಾಗಿದ್ದಾರೆ.
ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ 31 ವರ್ಷದ ಪಾಟಿದಾರ್ಗೆ ಇದೀಗ ಆರ್ ಸಿಬಿ ಕ್ಯಾಪ್ಟನ್ ಪಟ್ಟ ಒಲಿದಿದೆ.
ಕಳೆದೆರಡು ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು . 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.
ವಿರಾಟ್ ಕೊಹ್ಲಿ 2013 ರಿಂದ 2021 ರವರೆಗೆ ವಿರಾಟ್ 143 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದಾರೆ.
Key words: IPL, Rajat Patidar, appointed, RCB, new captain