ನವದೆಹಲಿ,ಮೇ,12,2022(www.justkannada.in): ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರು ನೇಮಕವಾಗಿದ್ದಾರೆ.
ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರ ಅಧಿಕಾರ ಮೇ 14ರಂದು ಕೊನೆಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್ ಅವರನ್ನ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರ ಅಧಿಕಾರ ಮೇ 14ರಂದು ಕೊನೆಗೊಳ್ಳಲಿದೆ. ಇವರ ಸ್ಥಾನಕ್ಕೆ ರಾಜೀವ್ ಕುಮಾರ್ ಅವರನ್ನು ನೇಮಿಸಲಾಗಿದೆ. ಮೇ 15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜೀವ್ ಕುಮಾರ್ ಅವರು ಜಾರ್ಖಂಡ್ ಕೇಡರ್ ನ 1984ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು 2020ರಲ್ಲಿ ಭಾರತ ಚುನಾವಣಾ ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮುನ್ನ ಅವರು ಸಾರ್ವಜನಿಕ ಉದ್ಯಮಗಳ ಮಂಡಳಿ, ಜಾರ್ಖಂಡ್ ಆಡಳಿತಾತ್ಮಕ ಸೇವೆ, ಕೇಂದ್ರ ಹಣಕಾಸು ಸಚಿವಾಲಯದ ಪ್ರಮುಖ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.
Key words: Rajiv Kumar -appointed -new -chief -election -commissioner