ಬೆಂಗಳೂರು,ಜೂ,3,2020(www.justkannada.in): ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಸರತ್ತು ಶುರು ಮಾಡಲು ಬಿಜೆಪಿ ಜೂನ್ 6 ರಂದು ಕೋರ್ ಕಮಿಟಿ ಸಭೆ ಕರೆದಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿ ಬಿಗ್ ಫೈಟ್ ನೀಡಲು ಮುಂದಾಗಿದೆ. ಹೀಗಾಗಿ ಜೂನ್ 6 ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದೆ. ಈ ವೇಳೆ ರಾಜ್ಯಸೌಭೆ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಕೋರ್ ಕಮಿಟಿ ಸಭೆ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರ ಜತೆ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Rajya Sabha elections-BJP- Core Committee –meeting- June 6