ಬೆಂಗಳೂರು, ಜನವರಿ 21, 2021 (www.justkannada.in): ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಆರಂಭವಾಗಿದೆ.
ಲಾಕ್ಡೌನ್ ಸಡಿಲಗೊಂಡ ನಂತರ ಮತ್ತೆ ಶೂಟಿಂಗ್ ಆರಂಭಿಸಿರುವ ಚಿತ್ರತಂಡ ಈಗಾಗಲೇ ಕೊಡೈಕೆನಾಲ್, ಹಿಮಾಚಲ ಪ್ರದೇಶ ಹಾಗೂ ಕಾಶ್ಮೀರದಲ್ಲಿಲ್ಲಿ ಶೂಟಿಂಗ್ ಮುಗಿಸಿದೆ.
ಚಾರ್ಲಿ ಚಿತ್ರತಂಡ ಮೊನ್ನೆಯೇ ಕಾಶ್ಮೀರ ಸೇರಿಕೊಂಡಿದ್ದು, ಅಲ್ಲಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ಗೆ ಎಲ್ಲ ಸಿದ್ಧತೆ ನಡೆಸಿದೆ.
ಕಾಶ್ಮೀರಕ್ಕೆ ಹೋಗುತ್ತಿದ್ದಂತೆಯೇ ಚಿತ್ರದ ನಿರ್ದೇಶಕ ಕಿರಣ್ ರಾಜ್ ಕೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದರು.
ಕಾಶ್ಮೀರದಲ್ಲಿ ಸಂಚರಿಸುತ್ತಿರುವ ವಿಡಿಯೋವನ್ನು ರಕ್ಷಿತ್ ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಹಂಚಿಕೊಂಡಿದ್ದಾರೆ.