ಬೆಳಗಾವಿ,ಜನವರಿ,18,2024(www.justkannada.in): ರಾಮಮಂದಿರ ಕಟ್ಟಿದ್ದು ಸರ್ಕಾರ ಅಲ್ಲ, ಹಿಂದೂಗಳು. ಯಾರೋ ಉದ್ಯಮಿ, ಕೈಗಾರಿಕೋದ್ಯಮಿಗಳು ಕಟ್ಟಿಲ್ಲ. ಹಳ್ಳಿ ಹಳ್ಳಿಯಿಂದ ಇಟ್ಟಿಗೆ ಕಳಿಸಿದ್ದೇವೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು.
ಇಂದು ಮಾತನಾಡಿದ ಅನಂತ್ ಕುಮಾರ್ ಹೆಗಡೆ, ಈಗಾಗಲೇ ರಾಮ ಮಂದಿರ ಉದ್ಘಾಟನೆ ಅಕ್ಷತೆ ಮನೆ ಮನೆಗೆ ಹೋಗಿದೆ. 500 ವರ್ಷದ ನಂತರ ನಮಗೆ ಜಯ ಸಿಕ್ಕಿದೆ. ರಾಮಮಂದಿರವನ್ನ ಇಡೀ ದೇಶದ ಜನ ಜಾಗೃತರಾಗಿ ಕಟ್ಟಿದ್ದು. ಅಯೋಧ್ಯ ಹಿಂದೂಗಳ ಪ್ರತೀಕ. ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ಅಪಮಾನವನ್ನ ತೊಳೆದು ರಾಮ ಮಂದಿರ ಕಟ್ಟಲಾಗಿದೆ. ನಾವು ಹಿಂದೂಗಳು ಎಂದು ಮರೆತು ಹೋಗಿತ್ತು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೇ ಅವರ ಜಾತಿ ಹೆಸರು ಹೇಳ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳುತ್ತಾರೆ ಎಂದರು.
ಜಾತಿ ಹೆಸರಲ್ಲಿ, ಭಾಷೆ ಹೆಸರಲ್ಲಿ ನಮ್ಮನ್ನ ಒಡೆದ್ರು. ಮರಾಠಿ, ಕನ್ನಡ ಒಂದಾಗ್ತಾರೆ ಅಂದರೆ ಕತ್ತಿ ತಗೊಂಡು ಬರುತ್ತಾರೆ. ಈ ರೀತಿ ಒಡೆದು ಇಟ್ಟರೆ ಅವರ ರಾಜಕಾರಣ ನಡೆಯುವುದು. ಸ್ವಾತಂತ್ರ್ಯದ ನಂತರ ಮರಾಠಿ-ಕನ್ನಡ ಜಗಳ ಶುರುವಾಯಿತು. ಸ್ವಾತಂತ್ರ್ಯ ನಂತರ ಎಲ್ಲದರಲ್ಲೂ ನಮ್ಮನ್ನ ಒಡೆದರು. ಇದನ್ನ ಹೊರತಾಗಿ ಒಟ್ಟಾಗಿ ಒಂದಾಗಿ ಹಿಂದೂ ಹೆಸರಲ್ಲಿ ಎದ್ದು ನಿಂತೆವು. ರಣ ಭೈರವ ರೀತಿಯಲ್ಲಿ ನಾವು ಈಗ ಏಳುತ್ತಿದ್ದೇವೆ ಎಂದು ಅನಂತ್ ಕುಮಾರ್ ಹೆಗಡೆ ತಿಳಿಸಿದರು.
Key words: Ram Mandir – built -not – government – Hindus – MP -Ananth Kumar Hegde