ಶಿವಮೊಗ್ಗ,ಫೆಬ್ರವರಿ.17,2021(www.justkannada.in): ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕರು ಎಚ್ಚರಿಕೆಯಿಂದ ಮಾತನಾಡಿ. ವಿನಃ ಕಾರಣ ಟೀಕಿಸಬೇಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಅಯೋಧ್ಯೆ ಮಂದಿರ ನಿರ್ಮಾಣದ ದೇಣಿಗೆ ಸಂಗ್ರಹ ವಿಚಾರದಲ್ಲಿ ಯಾವ ವ್ಯಕ್ತಿಯನ್ನು ಬಲವಂತವಾಗಿ ಹಣ ಕೇಳುತ್ತಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಬೇದ ಇಲ್ಲದೆ ಎಲ್ಲರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುತ್ತಿದ್ದಾರೆ ಎಂದರು.
ಮಂದಿರ ನಿರ್ಮಾಣಕ್ಕೆ ಹಣ ಕೊಡದಿದ್ದರೆ ಬೇಡ. ಆದರೆ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು. ಬೇರೆ ಕಡೆ ಮಂದಿರ ನಿರ್ಮಿಸಿದರೆ ದೇಣಿಗೆ ನೀಡುತ್ತೇನೆ ಎಂದು ವಿರೋಧ ಪಕ್ಷದ ನಾಯಕರು ಹೇಳಿರುವುದು ಸರಿಯಲ್ಲ. ಇಂತಹ ಹೇಳಿಕೆಗಳು ಸುಪ್ರೀಂಕೋರ್ಟ್ ತೀರ್ಪನ್ನೇ ಪ್ರಶ್ನಿಸಿದಂತಾಗುತ್ತದೆ. ವಿರೋಧ ಪಕ್ಷದ ನಾಯಕರು ಈ ರೀತಿ ಹಗುರವಾಗಿ ಮಾತನಾಡಬಾರದು. ಹಣವನ್ನು ಜನ ಸ್ವಯಂಪ್ರೇರಿತವಾಗಿ ನೀಡುತ್ತಿದ್ದಾರೆ. ಯಾರಿಗೂ ಬಲವಂತ ಮಾಡಿಲ್ಲ ಎಂದು ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.
Key words: rama mamdir- construction-money-CM BS Yeddyurappa – against -opposition leaders