ಮೈಸೂರು, ಆಗಸ್ಟ್, 29, 2021 (www.justkannada.in): ಮೈಸೂರು ಯುವ ಬಳಗ ವತಿಯಿಂದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ರವರ ಜನ್ಮದಿನೋತ್ಸವದ ಅಂಗವಾಗಿ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನ ವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ “ಮೌಲ್ಯಧಾರಿತ ಸಜ್ಜನ ರಾಜಕಾರಣಿ ರಾಮಕೃಷ್ಣ ಹೆಗಡೆ” ವಿಚಾರವಿನಿಮಯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾಕ್ಟರ್ ವೈ ಡಿ ರಾಜಣ್ಣ ರಾಮಕೃಷ್ಣ ಹೆಗಡೆ ರವರ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು, ನಂತರ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ॥ವೈ ಡಿ ರಾಜಣ್ಣ ಮಾತನಾಡಿ ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯ ಮೂಲಕ ನಾಡಿನ ಗ್ರಾಮೀಣ ಭಾಗದ ಜನರ ಹೊಸ ಚರಿತ್ರೆಯನ್ನು ಬರೆದವರು ರಾಮಕೃಷ್ಣ ಹೆಗಡೆಯವರು ಎಂದು ಸ್ಮರಿಸಿದರು.
ರಾಜ್ಯದ ಹಿರಿಯ ಹಾಗೂ ಮೌಲ್ಯಾಧಾರಿತ ರಾಜಕಾರಣಿ ಎಂದೆ ಜನಪ್ರಿಯತೆ ಗಳಿಸಿದ್ದ ರಾಜಕೀಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು, ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ರಚನೆ ಮಾಡಿ, ರಾಜ್ಯದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಎಂದರು.
೧೯೫೭ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ ಇವರು, ೧೯೭೫ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ಜೈಲುಸೇರಿ ಹೊರಬಂದ ನಂತರ ಜನತಾ ಪಾರ್ಟಿಯನ್ನು ಸೇರಿಕೊಂಡರು.
೧೯೮೫ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾದ ಇವರು ರಾಜ್ಯದಲ್ಲಿ ಪಂಚಾಯತ್ ರಾಜ್ ಕಾನೂನು, ಭ್ರಷ್ಟಾಚಾರ ತಡೆಗಟ್ಟಲು ಲೋಕಾಯುಕ್ತ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲು ಬಾರಿಗೆ ಜಾರಿಗೆ ತಂದ ರಾಜ್ಯ ಎಂಬ ಹೆಗ್ಗಳಿಕೆಯೊಂದಿಗೆ, ರೈತರ ಸಾಲ ಮನ್ನಾ, ಕಡಿಮೆ ಬಡ್ಡಿದರದಲ್ಲಿ ಸಾಲ ಸೇರಿದಂತೆ ಹತ್ತು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಮನದಾಳದಲ್ಲಿ ಹೆಗಡೆ ಅವರು ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾಕ್ಟರ್ ವೈ ಡಿ ರಾಜಣ್ಣ , ಮುಖಂಡರಾದ ಕೇಬಲ್ ಮಹೇಶ್ ,ವಿಕ್ರಂ ಅಯ್ಯಂಗಾರ್ ,ವಿಘ್ನೇಶ್ವರ ವಿ ಭಟ್ ,ಮೈಸೂರು ಯುವ ಬಳಗದ ಅಧ್ಯಕ್ಷ ನವೀನ್ ನವೀನ್ , ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ ,ಹರೀಶ್ ,ಮಹಾದೇವಿ, ಜಾನಪ,ಸನಂತ್ ,ಹಾಗೂ ಇನ್ನಿತರರು ಹಾಜರಿದ್ದರು.