ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಸಂಪುಟಕ್ಕೆ ಶಾಸಕರ ಸೇರ್ಪಡೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಯಾವುದೇ ಆಕ್ಷೇಪವಿಲ್ಲ. ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
key words : Ramesh Jaraki Hioli-MLA’s-Admission-Cabinet