ಬೆಂಗಳೂರು, ಏಪ್ರಿಲ್ , 13, 2024 (www.justkannada.in): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದೆ ಆದೇಶಿಸಿದ್ದಾರೆ.
ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನ ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್ಐಎ ಅಧಿಕಾರಿಗಳು ಮಂಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯಿರುವ ಇಂಟ್ರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು.
ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ ಎನ್ನಲಾಗಿದೆ.
Key words: Rameswaram café, accused, NIA