ಬೆಂಗಳೂರು, ಮಾರ್ಚ್ 26,2024(www.justkannada.in): ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶನಿವಾರ (ಮಾರ್ಚ್ 23) ಸಂಜೆಯೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಶಕ್ಕೆ ಪಡೆದ ಇಬ್ಬರು ಸಹ ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಇಬ್ಬರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಪ್ರಕರಣ ತನಿಖೆಯನ್ನು ಎನ್ಐಎಗೆ ವಹಿಸಲಾಗಿದ್ದು, ಪ್ರಕರಣ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಆರೋಪಿ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಾರ್ಚ್ 13 ರಂದು ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು.
Key words: Rameswaram Café, Bomb Blast Case, NIA.