ಮೈಸೂರು,ಜ,2,2020(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ವಿರೋಧಿಸಿ ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನಾ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಮಹಿಳಾ ದೌರ್ಜನ್ಯ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು. ಇನ್ನು ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ನೇತೃತ್ವದಲ್ಲಿ ಸಿಎಎ ವಿರೋಧಿಸಿ ರಂಗೋಲಿ ಪ್ರತಿಭಟನಾ ಸ್ಪರ್ಧೆ ನಡೆಯಿತು.
ಸಿಎಎ ಮತ್ತು ಎನ್.ಆರ್.ಸಿಗೆ ವಿರೋಧ ವ್ಯಕ್ತಪಡಿಸಿದ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು ರಂಗೋಲಿ ಬಿಡಿಸಿ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಸಿಎಎ ವಿರೋಧಿಸಿ ರಾಜ್ಯದ ಬಿಜೆಪಿ ಸಂಸದರ ನಿವಾಸಕ್ಕೆ ಭೇಟಿ ನೀಡಿ ಗುಲಾಬಿ ಹೂ ಮತ್ತು ಪತ್ರವನ್ನ ನೀಡಿ ಗಾಂಧಿಗಿರಿ ಮಾದರಿಯಲ್ಲಿ ರಾಜ್ಯಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆದಿತ್ತು.
Key words: Rangoli -protest – KPCC women’s- unit – Mysore -against -CAA and NRC.