ಬೆಂಗಳೂರು, ಮಾರ್ಚ್ 11,2025 (www.justkannada.in): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಂಬಂಧ ಶಿಷ್ಟಾಚಾರ ಉಲ್ಲಂಘನೆ ಕುರಿತು ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ಪ್ರಕರಣ ಸಂಬಂಧ ಇದೀಗ ರನ್ಯಾರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ.
ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸುವಂತೆ ಗೃಹ ಇಲಾಖೆ ಸೂಚಿಸಿದೆ.
ನಟಿ ರನ್ಯಾ ಚಿನ್ನ ಸಾಗಾಣೆ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವೇನು? ಕೇಸ್ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.
Key words: Ranya Rao, gold smuggling case, Government