ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ

ಮೈಸೂರು,ಮಾರ್ಚ್,26,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನೇ  ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ  ಗರ್ಭಿಣಿಯಾಗಿದ್ದಾಳೆ. ಪೊಲೀಸರು ಚಿಕ್ಕಪ್ಪನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಕಳೆದ ಎರಡು ತಿಂಗಳಿನಿಂದಲೂ ಮುಟ್ಟಾಗದ ಬಾಲಕಿ, ಈ ಹಿನ್ನೆಲೆಯಲ್ಲಿ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರೋದು ಬೆಳಕಿಗೆ ಬಂದಿದೆ.  ಈ ನಡುವೆ ಯಾರಿಗೂ ಹೇಳದಂತೆ  ಚಿಕ್ಕಪ್ಪ ವಿದ್ಯಾರ್ಥಿನಿಗೆ ಹೆದರಿಸಿದ್ದ ಎನ್ನಲಾಗಿದೆ.

ಸದ್ಯ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Key words: mysore, uncle, raped, minor girl