ಬೆಂಗಳೂರು,ಮಾರ್ಚ್,16,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಳಿಯಿಂದ ಹೇಳಿಕೆ ದಾಖಲಿಸಿಕೊಂಡಿದೆ.
ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರಿನಲ್ಲಿ ನೀಡಿರುವ ಅಂಶಕ್ಕೆ ಪೂರಕವಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ರಾಜಕೀಯ ವಿಚಾರದಲ್ಲಿ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ಹಣದ ವಿಚಾರದಲ್ಲೂ ನನ್ನನ್ನ ಟಾರ್ಗೆಟ್ ಮಾಡಿರಬಹುದು. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಲಾಗಿತ್ತು. ಸಿಡಿ ತೋರಿಸಿ ಹಣಕ್ಕೆ ಡಿ ಮ್ಯಾಂಡ್. ಮಾಡಲಾಗಿತ್ತು. ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
Key words: Rasaleele- CD case-Ramesh jarakiiholi -Statement -SIT