ಬೆಂಗಳೂರು,ಮಾರ್ಚ್,4,2021(www.justkannada.in): ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಪ್ರಕರಣದ ಹಿಂದೆ ಯಾರದ್ದೂ ಕೈವಾಡವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ರಾಜುಗೌಡ ಆಗ್ರಹಿಸಿದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ರಾಜುಗೌಡ, ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಆ ವಿಡಿಯೋ ನೊಡಿದರೇ ಪಿತೂರಿ ಎಂದು ಹೇಳಬಹುದು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. ಅವರು ಅಂತಹ ತಪ್ಪು ಮಾಡುವವರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಯಾರದೋ ಒತ್ತಾಯಕ್ಕಾಗಿ ರಾಜೀನಾಮೆ ನೀಡಿಲ್ಲ. ಇದು ಅವರ ವಿರುದ್ಧ ನಡೆದಿರುವ ವ್ಯವಸ್ಥಿತ ಷಡ್ಯಂತ್ರ. ಈ ಬಗ್ಗೆ ತನಿಖೆಯಾಗಬೇಕು ಎಂದು ರಾಜುಗೌಡ ಆಗ್ರಹಿಸಿದರು.
Key words: Rasaleele- CD –release- case-MLA- Raju Gowda- batting – Ramesh Jarakiiholi.