ಬೆಂಗಳೂರು,ಮಾರ್ಚ್,3,2021(www.justkannada.in): ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ತಲೆದಂಡವಾಗಿದೆ. ಹೌದು, ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದು ರಾಸಲೀಲೆ ವಿಡಿಯೋ ನಿನ್ನೆ ರಿಲೀಸ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ಹಾಗೂ ಯುವತಿಯೊಂದಿಗಿದ್ದ ವಿಡಿಯೋ ಹಾಗೂ ಅವರುಗಳು ಮಾತನಾಡಿರುವ ಆಡಿಯೋದೊಂದಿಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಲ್ಲದೆ ಈ ವಿಚಾರ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ವಿಚಾರ ಬಹಿರಂಗವಾಗುತ್ತಿದ್ದಂತೆ ವಿಪಕ್ಷಗಳು ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದ್ದವು. ಇದೀಗ ಸಿಎಂ ಬಿಎಸ್ ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇನ್ನು ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಆರೋಪಮುಕ್ತರಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ENGLISH SUMMARY…
Sex CD case: Minister Ramesh Jarkiholi resigns
Bengaluru, Mar. 03, 2021 (www.justkannada.in): Water Resources Minister Ramesh Jarkiholi has resigned from his post following a CD showing himself getting intimate with a woman going viral. He has submitted his resignation on moral grounds.
It is alleged that the Minister had misused his power to offer a government job to a woman and using her sexually. The CD which was released yesterday had gone viral yesterday, causing an uproar among the opposition parties and public. A person named Dinesh Kallahalli had appeared at the Cubbon Park Police Station in Bengaluru along with the CD comprising the video and an audio and lodged a police complaint.
Keywords: Water Resources Minister Ramesh Jarkiholi/ BJP/ resignation/ Sex CD/ viral
Key words: Rasaleele -video –case-Ramesh jarakiiholi- resigns – minister-position