ನವದೆಹಲಿ, ಫೆಬ್ರುವರಿ 7,2025 (www.justkannada.in): ಐದು ವರ್ಷಗಳ ಬಳಿಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ರೆಪೋ ದರವನ್ನ ಇಳಿಕೆ ಮಾಡಿದೆ.
ಶೇ. 6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸುವುದಾಗಿ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಘೋಷಣೆ ಮಾಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ನ ಮಾನಿಟರಿ ಪಾಲಿಸಿ ಕಮಿಟಿ ರೆಪೋದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಮೊನ್ನೆಯಿಂದ ನಡೆದಿದ್ದ ಎಂಪಿಸಿ ಸಭೆಯ ಬಳಿಕ ಇಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್ಬಿಐನ ರಿಪೋ ದರ ಇಳಿಕೆ ಆಗಿದೆ. ಎಂಪಿಸಿಯಲ್ಲಿರುವ ಎಲ್ಲಾ ಆರು ಸದಸ್ಯರು ಸರ್ವಾನುಮತದಿಂದ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಿದ್ದಾರೆ. ಈ ರಿಪೋ ದರ ಇಳಿಕೆಯಿಂದ ಬ್ಯಾಂಕುಗಳ ಸಾಲದರಗಳು ಕಡಿಮೆಗೊಳ್ಳುವ ಸಾಧ್ಯತೆ ಇದೆ.
Key words: RBI, Decrease, repo rate,