ಮುಂಬೈ,ಡಿಸೆಂಬರ್,7,2022(www.justkannada.in): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿ ಸಮಿತಿ ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದು,ರೆಪೊದರವನ್ನ ಶೇ 0.35ರಷ್ಟು ಹೆಚ್ಚಿಸಿದೆ.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಪತ್ರಿಕಾಗೋಷ್ಠಿ ಮೂಲಕ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಈವರೆಗೆ ಶೇಕಡಾ 5.90ರಷ್ಟು ಇದ್ದ ರೆಪೊ ದರ ಈಗ ಶೇಕಡಾ 6.25 ಆಗಿದೆ. ಪರಿಷ್ಕೃತ ರೆಪೊ ದರ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆರ್ ಬಿಐ ಘೋಷಿಸಿದೆ.
ರೆಪೊ ದರ ಹೆಚ್ಚಳದ ಪರಿಣಾಮವಾಗಿ ವಾಹನ, ಗೃಹ ಸೇರಿದಂತೆ ವಿವಿಧ ಸಾಲಗಳ ಬಡ್ಡಿ ದರ, ಇಎಂಐ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ದೇಶದಲ್ಲಿ ಹಣದುಬ್ಬರ ನಿಯಂತ್ರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
Key words: RBI –hiked- repo -rate – 0.35 percent.