ಕೊಡಗು,ಆ,14,2019(www.justkannada.in): ಕಳೆ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆರಾಯ ಮತ್ತೆ ಆರ್ಭಟ ಮುಂದುರೆಸುವ ಸೂಚನೆ ಹಿನ್ನೆಲೆ ಕೊಡಗು, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಇದೀಗ ಮತ್ತೆ ಮಳೆಯ ಸೂಚನೆ ಇದ್ದು ಹೀಗಾಗಿ ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಅವರು ನಾಳೆ ಮುಂಜಾನೆವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಹಾಗೆಯೇ ನಾಳೆಯಿಂದ ಶುಕ್ರವಾರದವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಕೇಂದ್ರ ಹವಮಾನ ಇಲಾಖೆ ವರದಿ ಆಧರಿಸಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳು ಧಾರಾಕಾರ ಮಳೆ ಪ್ರವಾಹದಿಂದ ತತ್ತರಿಸಿದ್ದು ಇದೀಗ ಮತ್ತೆ ವರುಣ ಅಬ್ಬರಿಸಿದರೇ ಏನು ಗತಿ ಎಂಬ ಆತಂಕದಲ್ಲಿ ಜನರಿದ್ದಾರೆ.
key words: Red Alert- Announced- Again – Kodagu – Udupi Districts