ಬೆಂಗಳೂರು, ಅಕ್ಟೋಬರ್, 5,2023(www.justkannada.in): ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ ಹಾಕಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಇಂದು ಮಾತನಾಡಿದ ಅವರು, ಸದ್ಯಕ್ಕೆ ಮಳೆ ನಿಂತಿದೆ. ಮತ್ತೆ ಸದ್ಯದಲ್ಲೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮಳೆ ಆರಂಭವಾಗುವ ಹೊತ್ತಿಗೆ ಎಲ್ಲಾ ಕಾಮಗಾರಿ ಕೆಲಸ ಮುಗಿಸಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ನಿನ್ನೆ ರಾಜಧಾನಿ ರೌಂಡ್ಸ್ ನಡೆಸಿದ್ದ ಬೆಂಗಳೂರು ಉಸ್ತುವಾರಿ ಸಚಿವರೂ ಆದ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಸ್ಥಿತಿಗತಿ, ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಳೆ ಆರಂಭ ಹೊತ್ತಿಗೆ ಎಲ್ಲಾ ಕೆಲಸ ಮುಗಿಸಲು ಸೂಚನೆ ನೀಡಿದ್ದೇನೆ. ಶೇಕಡಾ 50ರಷ್ಟು ಸರ್ಕಾರದ ಬಿಲ್ ಗಳನ್ನು ರಿಲೀಸ್ ಮಾಡಲಿದ್ದೇವೆ. 432 ಕೋಟಿ ಬಿಬಿಎಂಪಿ ಕಾಮಗಾರಿ ಬಿಲ್ ಬಿಡುಗಡೆ ಮಾಡುತ್ತೇವೆ. ಕಾಮಗಾರಿ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದರು.
ಅಕ್ಟೋಬರ್ 7 ರಂದು ಟ್ರಾಫಿಕ್ ಕಂಟ್ರೋಲ್ ಕುರಿತು ಸಭೆ ಮಾಡುತ್ತೇವೆ. ಬೆಂಗಳೂರಿನ ಎಲ್ಲಾ ಕಡೆ ಟ್ರಾಫಿಕ್ ಕಂಟ್ರೋಲ್ ಅಸಾಧ್ಯ. ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕ್ರಮ ತೆಗೆದುಕೊಳ್ಳಬೇಕು ಎಂದರು.
Key words: release -50% – government –bill-DCM- DK Shivakumar