ನವದೆಹಲಿ, ನವೆಂಬರ್, 24, 2019 (www.justkannada.in): ಸುಪ್ರೀಂ ಕೋರ್ಟ್ ನಿಂದ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟಂತ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ, ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ಪಕ್ಷಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು.
ಈ ಕುರಿತಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ತುರ್ತು ವಿಚಾರಣೆ ಕೈಗೆತ್ತಿಕೊಂಡು, ತಕ್ಷಣಕ್ಕೆ ಬಹುಮತ ಸಾಭೀತು ಪಡಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ, ತಾತ್ಕಾಲಿಕ ರಿಲೀಫ್ ಅನ್ನು ಸುಪ್ರೀಂ ಕೋರ್ಟ್ ನೀಡಿದೆ.
ವಾದ ವಿವಾದ ಆಲಿಸಿದ ನ್ಯಾಯಾಲಯ, ಸದ್ಯಕ್ಕೆ ಸರ್ಕಾರ ಬಹುಮತ ಸಾಭೀತು ಪಡಿಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಫಡ್ನವೀಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದ್ದು ಅಸಂವಿಧಾನಿಕವಾಗಿದೆ.
ನಾಳೆ ಬೆಳಿಗ್ಗೆ 10.30ರ ಒಳಗಾಗಿ ಸುಪ್ರೀಂ ಕೋರ್ಟ್ ಗೆ ಉತ್ತರಿಸುವಂತೆ ಕಾಂಗ್ರೆಸ್, ಶಿವಸೇನೆ, ಎನ್ ಸಿ ಪಿ ಹಾಗೂ ಬಿಜೆಪಿ ಪಕ್ಷಗಳಿಗೆ ನೋಟೀಸ್ ನೀಡುವ ಮೂಲಕ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಮೂಲಕ ಅಂತಿಮ ತೀರ್ಪನ್ನು ನಾಳೆಗೆ ಮುಂದೂಡಿದೆ.