ಬೆಂಗಳೂರು,ಜನವರಿ,12,2023(www.justkannada.in): ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಈ ಬಾರಿ ಅನುಮತಿ ನಿರಾಕರಿಸಿತ್ತು. ಆದರೆ ಕೇಂದ್ರ ಸರ್ಕಾರದ ನಡೆಗೆ ರಾಜ್ಯದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ೀ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಇದೀಗ ಕೊನೆ ಕ್ಷಣದಲ್ಲಿ ಕರ್ನಾಟಕದ ನಾರಿಶಕ್ತಿ ಸ್ತಬ್ದಚಿತ್ರ ಸೇರ್ಪಡೆ ಮಾಡಿದೆ.
ಈ ಮೂಲಕ ಗಣರಾಜ್ಯೋತ್ಸವದಲ್ಲಿ ಸತತ 14ನೇ ಬಾರಿ ರಾಜ್ಯದ ಟ್ಯಾಬ್ಲೋ ಪ್ರದರ್ಶನವಾಗುತ್ತಿದೆ. ರಾಜ್ಯದ ಟ್ಯಾಬ್ಲೊಗೆ ಕೇಂದ್ರದಿಂದ ಅನುಮತಿ ನಿರಾಕರಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.
Key words: Republic Day- Green signal – Karnataka-tablo