ಚಾಮರಾಜನಗರ,ಏಪ್ರಿಲ್,24,2023(www.justkannada.in): ಮುಸ್ಲಿಂ, ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಕಣ್ಣೊರೆಸುವ ಕೆಲಸ ಮಾಡಿದೆ ಅಷ್ಟೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮಾತನಾಡಿದ ಮಾತನಾಡಿದ ಅಮಿತ್ ಶಾ, ಮುಸ್ಲಿಂ ಹಾಗೂ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಕೇವಲ ಕಣ್ಣೊರೆಸುವ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಶೇ 4ರ ಮೀಸಲಾತಿ ನೀಡಿತ್ತು. ಆದರೆ ಬಿಜೆಪಿ ಅದನ್ನ ತೆಗೆದು ಹಾಕಿದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ, ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಮರಿಗಿರುವ ಮೀಸಲಾತಿಯನ್ನು ಕೊಡುತ್ತೇವೆ ಎಂಬುದಾಗಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರೇ, ಮುಸ್ಲಿಮರಿಗೆ ಮೀಸಲಾತಿ ವಾಪಸ್ ಕೊಡುವ ಬಗ್ಗೆ ಮಾತನಾಡುತ್ತಿದ್ದೀರಿ. ಅದಕ್ಕಾಗಿ ಯಾರಿಗೆ ಮೀಸಲಾತಿ ಕಡಿಮೆ ಮಾಡುತ್ತೀರಿ? ಕರ್ನಾಟಕದ ಜನರಿಗೆ ಉತ್ತರ ಕೊಡಿ. ಒಕ್ಕಲಿಗರದ್ದು ಕಡಿಮೆ ಮಾಡುತ್ತೀರಾ? ಲಿಂಗಾಯತರದ್ದು ಕಡಿಮೆ ಮಾಡುತ್ತೀರಾ? ಅಥವಾ ಎಸ್ .ಸಿ ಮತ್ತು ಎಸ್ ಟಿ ಮೀಸಲಾತಿ ಕಡಿಮೆ ಮಾಡುತ್ತೀರಾ? ಎಂದು ಟಾಂಗ್ ನೀಡಿದರು.
ಸರ್ವರು ಸಮೃದ್ಧಿಯಾಗಿರಬೇಕು ಅಂದರೆ ಬಿಜೆಪಿ ಸರ್ಕಾರ ಬರಬೇಕಿದೆ, ಈ ಬಾರಿ ನಿರಂಜನ್ ಕುಮಾರ್ ಗೆ ಆಶೀರ್ವಾದ ಮಾಡಿ ಮತ ನೀಡಿ ಎಂದು ಅಮಿತ್ ಶಾ ಮನವಿ ಮಾಡಿದರು.
Key words: reservation-congress-Union Home Minister -Amit Shah-chamarajanagar