ಆಗ ಮೀಸಲಾತಿ ಕೊಡದೆ ಈಗ ಮೂಗಿಗೆ ತುಪ್ಪ ಸವರುತ್ತಿದ್ದಾರೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಬೆಳಗಾವಿ,ಡಿಸೆಂಬರ್,12,2024 (www.justkannada.in):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಸರ್ಕಾರದ ವಿರುದ್ದ ಪ್ರತಿಭಟನೆಗಿಳಿದಿರುವ ಬಿಜೆಪಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಪಂಚಮಸಾಲಿ ಹೋರಾಟ ರಾಜಕೀಯವಾಗುತ್ತಿದೆ.  ಯಾವುದೇ ಹೋರಾಟದಲ್ಲಿ ಬಿಜೆಪಿ ಕಾಂಗ್ರೆಸ್ ಎಂಬುದು ಬರಬಾರದು. ವಿಪಕ್ಷಗಳಿಗೆ  ಈ ಪ್ರೀತಿ ಮೊದಲೇ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತದ  ಅವಧಿಯಲ್ಲಿ ಯಾಕೆ 2ಎ ಮೀಸಲಾತಿ ಕೊಡಲಿಲ್ಲ. ಆಗ ಮೀಸಲಾತಿ ಕೊಡದೆ ಈಗ ಮೂಗಿಗೆ ತುಪ್ಪ ಸವರುತ್ತಿದ್ದಾರೆ. ಯಾರೇ ಆದರೂ ಸರಿ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Key words: reservation, bjp, Minister, Lakshmi Hebbalkar