ದಾವಣಗೆರೆ, ಸೆಪ್ಟೆಂಬರ್,06,2020(www.justkannada.in) : ನ್ಯಾ,ನಾಗಮೋಹನ ದಾಸ್ ವರದಿ ಜಾರಿಗೊಳಿಸುವ ಮೂಲಕ ವಾಲ್ಮೀಕಿ ಸಮುದಾಯಕ್ಕೆ ಶೆ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು. ಇಲ್ಲವಾದಲ್ಲಿ ರಾಜೀನಾಮೆ ನೀಡುವುದಾಗಿ ಈ ಹಿಂದೆ ಹೇಳಿದಕ್ಕೆ ನಾನು ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಇಂದು ದಾವಣಗೆರೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮಿಕಿ ಗುರುಪೀಠದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳವಾಗಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಕುರಿತು ಚರ್ಚಿಸಿ ಶೀಘ್ರವೇ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳೆ, ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಸಂಬಂಧಿಸಿದಂತೆ ಚರ್ಚೆಗೆ ಕರೆದರೆ ಭಾಗವಹಿಸಲಾಗುವುದು. ವಾಲ್ಮೀಕಿ ಸಮುದಾಯಕ್ಕೆ ಶೇ.7.5% ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
key words : reservation-not-increased-ST-community-sure-resign-Minister Sriramulu