ಬೆಂಗಳೂರು ಗ್ರಾಮಾಂತರ, ಜನವರಿ, 13,2025 (www.justkannada.in): ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ “2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್.ಅಂಬೇಡ್ಕರ್/ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಜನವರಿ 25 ರೊಳಗೆ http://kreis.kar.nic.in ವೆಬ್ ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಾಗಿರಬೇಕು.
ಫೆಬ್ರವರಿ 15 ರಂದು ಪ್ರವೇಶ ಪರೀಕ್ಷೆ.
ಅರ್ಹ ಅಭ್ಯರ್ಥಿಗಳಿಗೆ ಫೆಬ್ರವರಿ 15 ರಂದು ಪ್ರವೇಶ ಪರೀಕ್ಷೆ ಏರ್ಪಡಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಉಚಿತ ಊಟ ಕೊಟ್ಟು ಶಿಕ್ಷಣ ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು.
ಪ್ರಾಂಶುಪಾಲರು, ಬಚ್ಚಹಳ್ಳಿ-8105526933. ಪ್ರಾಂಶುಪಾಲರು, ಬೊಮ್ಮವಾರ-7349391473.
ಪ್ರಾಂಶುಪಾಲರು ಕುಂದಾಣ -9902534050.
ಪ್ರಾಂಶುಪಾಲರು,ನೆಲಮಂಗಲ -8495812105. ಪ್ರಾಂಶುಪಾಲರು, ಕೊಂಡ್ರಹಳ್ಳಿ-9902989639.
ಪ್ರಾಂಶುಪಾಲರು,ಬೈರಾಪುರ-9916582001. ಪ್ರಾಂಶುಪಾಲರು, ಬೈರನಾಯಕನಹಳ್ಳಿ-7259882671.
ಪ್ರಾಂಶುಪಾಲರು, ಮಾರ್ಡೇಶ್ವರ- 9845308319.
ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 27681784. ದೊಡ್ಡಬಳ್ಳಾಪುರ ತಾಲೂಕು ದೂರವಾಣಿ ಸಂಖ್ಯೆ 27623681. ಹೊಸಕೋಟೆ ತಾಲ್ಲೂಕು ದೂ.ಸಂ 127931528. ನೆಲಮಂಗಲ ತಾಲ್ಲೂಕು ದೂ.ಸಂ 27723172. ಅಥವಾ ಉಪನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Admission, 6th Class, residential schools, Apply online