ಬೆಂಗಳೂರು,ಜು,10,2019(www.justkannada.in): ಪ್ರಜಾಪ್ರಭುತ್ವದ ಕಗ್ಗೊಲೆ ರಾಜ್ಯದಲ್ಲಾಗುತ್ತಿದೆ. ನಿಮಗೆ ನಾಚಿಕೆ ಮಾನ ಮರ್ಯಾದೆ ಇದ್ರೆ ತಕ್ಷಣ ರಾಜಿನಾಮೆ ಕೊಟ್ಟು ಹೋಗಿ. ಬಿಜೆಪಿ ಸರ್ಕಾರ ರಚನೆ ಮಾಡಲು ಬಿಡಿ ಎಂದು ಸಿಎಂ ಹೆಚ್,ಡಿ ಕುಮಾರಸ್ವಾಮಿ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಗುಡುಗಿದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ಬಹುಮತ ಕಳೆದುಕೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಸರ್ಕಾರದ ರಾಜೀನಾಮೆಗೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ನೀವು ಅಪ್ಪ ಮಕ್ಕಳು ರಾಜ್ಯದ ಜನತೆಯ ಜೊತೆ ಆಟವಾಡುತ್ತಿದ್ದೀರಾ. ನಿಮಗೆ ನಾಚಿಕೆ ಮಾನ ಮರ್ಯಾದೆ ಇದ್ರೆ ತಕ್ಷಣ ರಾಜಿನಾಮೆ ಕೊಟ್ಟು ಹೋಗಿ. ಬಿಜೆಪಿ ಸರ್ಕಾರ ರಚನೆ ಮಾಡಲು ಬಿಡಿ. ಈಗಾಗಲೇ ಮುಂಬೈನಲ್ಲಿರೊ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನಾಳೆ ಸುಪ್ರೀಂ ತೀರ್ಪು ಬರಲಿದೆ ಸ್ಪೀಕರ್ ಕೂಡಲೇ ರಾಜಿನಾಮೆ ಅಂಗಿಕರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದೀನಿ ಎಂದರು.
ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿದೆ. ಅಲ್ಲದೆ ರಾಜ್ಯದಲ್ಲಿ ತೊಘಲಕ್ ದರ್ಬಾರ್ ಮಾಡುತ್ತಿದೆ. 14 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಸರ್ಕಾರ ಜನರ ಪಾಲಿಗೆ ಸತ್ತಿದೆ. ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಬೇಕು ಎಂದು ಆಗ್ರಹಿಸಿದರು.
ಶಿವಕುಮಾರ್ ಮುಂಬಯಿಗೆ ಹೋಗಿ ದಬ್ಬಾಳಿಕೆ ಮಾಡುವ ಕೆಲಸ ಮಾಡಿದ್ದಾರೆ. ಶಾಸಕರೊಬ್ಬರ ರಾಜೀನಾಮೆ ಹರಿದು ಹಾಕುವ ಕೆಲಸ ಮಾಡಿದ್ದರು. ಡಿಕೆಶಿ ವಿರುದ್ದ ಸ್ಪೀಕರ್ ಕ್ರಮ ಕೈಗೊಂಡಿಲ್ಲ. ಶಿವಕುಮಾರ್ ಗೂಂಡಾ ಪ್ರವೃತ್ತಿ ಮಾಡಿದ್ದಾರೆ. ಇನ್ನು ಅಧಿವೇಶನ ನಡೆಸುವ ನೈತಿಕತೆ ಕುಮಾರಸ್ವಾಮಿಗೆ ಇಲ್ಲ. ಕೂಡಲೇ ಅವರು ರಾಜೀನಾಮೆ ನೀಡಬೇಕು. ಸ್ಪೀಕರ್ ಬಗ್ಗೆ ನಮಗೆ ಗೌರವ ಇದೆ. ಅವರು ಶಾಸಕರ ರಾಜೀನಾಮೆ ಕೂಡಲೇ ಅಂಗೀಕಾರ ಮಾಡಬೇಕು. ಈ ಬಗ್ಗೆ ನಾವು ಮಧ್ಯಾಹ್ನ ಸ್ಪೀಕರ್ ಭೇಟಿಗೆ ನಿರ್ಧಾರ ಮಾಡಿದ್ದೇವೆ ಎಂದರು.
Key words: Resign- immediately- BS Yeddyurappa- against -CM HDK