ಅತೃಪ್ತ ಶಾಸಕರು ರಾಜೀನಾಮೆ ಹಿನ್ನೆಲೆ; ಗೌಪ್ಯ ಸಭೆ ನಡೆಸಿ ಚರ್ಚಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…

ಬೆಂಗಳೂರು,ಜು,6,2019(www.justkannada.in): ಮೈತ್ರಿ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಈಗಾಗಲೇ ಸ್ಪೀಕರ್ ಕಾರ್ಯದರ್ಶಿಗೆ 8 ಮಂದಿ ಶಾಸಕರು ರಾಜೀನಾಮೆ ನೀಡಿದ್ದು ಇನ್ನು ಐದು ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆ ಸಚಿವ ಕೆ.ಜೆ ಜಾರ್ಜ್ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಗೃಹ ಸಚಿವ ಎಂ.ಬಿ ಪಾಟೀಲ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಮುಂದಿನ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶಿವರಾಮ್ ಹೆಬ್ಬಾರ್, ಬಿಸಿ ಪಾಟೀಲ್ ಹಾಗೂ ಜೆಡಿಎಸ್ ಶಾಸಕರಾದ ಹೆಚ್.ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ ಅವರು ಸ್ಪೀಕರ್ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ. ಅತೃಪ್ತ ಶಾಸಕರು ಸ್ಪೀಕರ್ ಕಚೇರಿಗೆ ಆಗಮಿಸುವ ಮುನ್ನವೇ ಸ್ಪೀಕರ್ ರಮೇಶ್ ಕುಮಾರ್ ಅಲ್ಲಿಂದ ತೆರಳಿದ್ದು ಹೀಗಾಗಿ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನು ಶಾಸಕರಾದ ರಾಮಲಿಂಗರೆಡ್ಡಿ, ಸೌಮ್ಯರೆಡ್ಡಿ ಸೇರಿ ಐದು ಮಂದಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

Key words: resignation – MLA- Former CM -Siddaramaiah – meeting.