ಉಡುಪಿ, ಡಿಸೆಂಬರ್ 21, 2019 (www.justkannada.in): ತೀವ್ರ ಉಸಿರಾಟ ತೊಂದರೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಿಗೆ ವೆಂಟಿಲೇಟರ್ (ಕೃತಕ ಉಸಿರಾಟ) ಮೂಲಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಶ್ರೀಗಳ ಆರೋಗ್ಯ ಪರಿಸ್ಥಿತಿ ಗಂಭೀರವಾಗಿಯೇ ಇದೆ. ಆದರೆ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಪೇಜಾವರಶ್ರೀಗಳು 24ಗಂಟೆಗಳ ಬಳಿಕವೂ ಗಂಭೀರ ಸ್ಥಿತಿಯಲ್ಲೇ ಇದ್ದರೂ ಚಿಕಿತ್ಸೆಗೆ ಸ್ಪಂದಿಸಿತ್ತಿದ್ದಾರೆ. ವ್ಯದ್ಯರು 48ಗಂಟೆಗಳ ತೀವ್ರ ನಿಗಾ ವಹಿಸಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.