ಮೈಸೂರು,ಸೆಪ್ಟಂಬರ್,5,2024 (www.justkannada.in): ಮಕ್ಕಳನ್ನು ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ. ಹಾಗೆಯೇ ಸರ್ಕಾರಿ ಶಾಲೆ ಉಳಿಸಿವ ಕೆಲಸವಾಗಬೇಕು ಎಂದು ಶಾಸಕ ಜಿಟಿ ದೇವೇಗೌಡ ತಿಳಿಸಿದರು.
ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ಗುರುವಾರ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸರ್ಕಾರಿ, ಖಾಶಗಿ ಶಾಲೆಗಳು ಎನ್ನುವ ತಾರತಮ್ಯ ಇಲ್ಲದೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದ ಜಾಗವನ್ನು ಅಳತೆ ಮಾಡಿಸಿ ಖಾತೆ ಮಾಡಿಸಿಕೊಂಡು ಹದ್ದುಬಸ್ತಿನಲ್ಲಿಡಬೇಕು. ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಫಲಿತಾಂಶ ತರಬೇಕು. ಖಾಸಗಿ ಶಾಲೆಗಳಲ್ಲೂ ಕೂಡ ಮಕ್ಕಳು ಓದುತ್ತಿದ್ದಾರೆ. ದಿನದಿಂದ ದಿನಕ್ಕೆ ಭೂಮಿಯ ಬೆಲೆ ಹೆಚ್ಚಾಗುತ್ತಿರುವ ಪರಿಣಾಮ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕು. ಶಾಲೆಗಳ ಸುತ್ತಮುತ್ತಲ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿಸಬೇಕು. ಅದಕ್ಕೆ ತಕ್ಕಂತೆ ಸ್ಕೆಚ್ ,ಖಾತೆ ಮಾಡಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸೇರಿ ಆಯಾಯಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ಕುಳಿತು ಬೇಗನೆ ಮುಗಿಸಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ನಿವೃತ್ತ ಮತ್ತು ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜಿಪಂ ಮಾಜಿ ಸದಸ್ಯೆ ಚಂದ್ರಿಕಾಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿವೇಕಾನಂದ, ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜಿಪಂ ಮಾಜಿ ಸದಸ್ಯೆ ಚಂದ್ರಿಕಾಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿವೇಕಾನಂದ, ಶಿಕ್ಷಕರ ಸಂಘದ ಕಾರ್ಯದರ್ಶಿ ಮಾಲೇಗೌಡ, ಗೌರವಾಧ್ಯಕ್ಷ ಸತೀಶ್, ಕಾರ್ಯಾಧ್ಯಕ್ಷ ಎಸ್.ರಘು, ಉಪಾಧ್ಯಕ್ಷರಾದ ಶಿವಪ್ಪ, ಸುಮತಿ, ಖಜಾಂಚಿ ಅಶೋಕ್, ಸಹ ಕಾರ್ಯದರ್ಶಿ ಅನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಸುರೇಶ್, ಸಹ ಕಾರ್ಯದರ್ಶಿ ಶ್ಯಾಮಲಾ, ರೇಣುಕಾ ಹಾಜರಿದ್ದರು.
Key words: responsibility, teachers, children, MLA, GT Deve Gowda