ಬಂದ್ ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ- ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು,ಡಿಸೆಂಬರ್,4,2020(www.justkannada.in): ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ನಾಳೆ ವಿವಿಧ  ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆ ಬಂದ್ ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ   ಎಂದು ರಾಜ್ಯ ಹೈಕೋರ್ಟ್ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.logo-justkannada-mysore

ನಾಳೆ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ  ನೀಡಿರುವ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದೆ, ಬಂದ್ ವೇಳೆ ಬೀದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆಗಾರಾಗುತ್ತಾರೆ. ರ್ಯಾಲಿ ವೇಳೆ ಕೊವೀಡ್ ಮಾರ್ಗಸೂಚಿ ಉಲ್ಲಂಘನೆಯಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ನಿರ್ದೇಶನ ನೀಡಿದೆ. ಪಿಐಎಲ್ ವಿಚಾರಣೆ ನಡೆಸಿ ಸಿಜೆ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

responsible-financial-loss-bandh-high-court-warning

ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ನೋಟಿಸ್ ನೀಡಿ, ಡಿಸೆಂಬರ್.17ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಕ್ಷಗಳಿಗೆ ಹೈಕೋರ್ಟ್ ತಾಕೀತು ಮಾಡಿದೆ. ಮಾಸ್ಕ್, ದೈಹಿಕ ಅಂತರದ ಬಗ್ಗೆ ಪೊಲೀಸರು ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ರಾಜ್ಯ ಸರ್ಕಾರ ಸಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.

Key words: responsible – financial loss – bandh- High Court -Warning.