ಬೆಂಗಳೂರು,ಅಕ್ಟೋಬರ್,16,2021(www.justkannada.in): ಸಿದ್ದಹಸ್ತ ಸೂತ್ರಧಾರಿಯಿಂದ ಒಳ ರಾಜಕೀಯ ನಡೆದಿದೆ. ಅದಕ್ಕೆ ಅಲ್ಪಸಂಖ್ಯಾತ ನಾಯಕರು ಬಲಿಯಾಗಿದ್ದಾರೆ. ಒಳ ರಾಜಕೀಯಕ್ಕೆ ಬಲಿಯಾದವರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಇದರ ಬಗ್ಗೆ ಜನರಿಗೆ ಗೊತ್ತಾಗಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿ ಸಿದ್ಧರಾಮಯ್ಯ ವಿರುದ್ಧ ಪರೋಕ್ಷ ಕಿಡಿಕಾರಿರುವ ಹೆಚ್. ಡಿ ಕುಮಾರಸ್ವಾಮಿ, ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲಾ ಪೋಣಿಸಿ ‘ಅಹಿಂದ’ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ. ‘ಸಿದ್ದಹಸ್ತ ಶೂರ’ರಿಂದ ತಮ್ಮ ಪಕ್ಷದ ಒಬ್ಬೊಬ್ಬ ನಾಯಕನನ್ನೇ ಟಾರ್ಗೆಟ್ ಮಾಡಿ ಮುಗಿಸ್ತಿದ್ದಾರೆ. ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣ’ದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಹೆಚ್.ಡಿಕೆ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದು ಹೀಗೆ…?
2012ರಲ್ಲಿ ವಿಧಾನಪರಿಷತ್ನ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಸರಡಗಿ ಸೋಲುತ್ತಾರೆ. ಆದರೆ ಪಕ್ಷೇತರ ಅಭ್ಯರ್ಥಿ ಭೈರತಿ ಸುರೇಶ್ ಗೆಲ್ಲುತ್ತಾರೆ. ಇಲ್ಲಿ ಭೈರತಿ ಸುರೇಶ್ ಗೆಲುವಿಗೆ ಕಾರಣ ಯಾರು? ಸಿದ್ದಸೂತ್ರ ಹೆಣೆದಿದ್ದು ಯಾರು?
ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.
ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.
ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?
ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ.
ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ಹೆಚ್.ಡಿಕೆ ಎಚ್ಚರಿಕೆ ನೀಡಿದ್ದಾರೆ.
Key words: responsible -‘political – Congress- Siddaramaiah- HD kumaraswamy- tweet
ENGLISH SUMMARY….
Who is responsible for the ‘Political Assassination’ of the Congress? Let the people know – Series of tweets by HDK against Siddu
Bengaluru, October 16, 2021 (www.justkannada.in): Former Chief Minister H.D. Kumaraswamy has undertaken a tirade against Leader of the Opposition in the Assembly Siddaramaiah by making a series of tweets. One of these tweets read: “A veteran politician is playing internal politics resulting in the exploitation of minorities. There is a big list of such people who have been exploited due to his internal politics. Who is the reason for the ‘Political Assassination’ of Congress? Let the people come to know about this.”
Another tweet read, “Siddaramaiah misled the people by creating a well-thought plan called ‘AHINDA’. He is an expert in such things. This way he is targeting one politician after the other and ending their career. He has emerged as the political terminator of the ‘minorities end politics.
Keywords: Former CM H.D. Kumaraswamy/ Siddaramaiah/ political assassination/ tweet