ಬೆಂಗಳೂರು,ಜೂನ್,14,2022(www.justkannada.in): ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನ ನೇಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಸ್ತುತ ಉಪ ಲೋಕಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಇನ್ನು ಭೀಮನಗೌಡ ಸಂಗನಗೌಡ ಪಾಟೀಲ್ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಬೆಳಿಗ್ಗೆ 9.45ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
Key words: Retired Justice -BS Patil- appointed- Karnataka -Lokayukta